ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ. ಅಂದು ಇಡೀ ಚಿತ್ರರಂಗ ಅಲ್ಲಿ ಹಾಜರ್ ಇರಲಿದೆ. ಆದರೆ, ಆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಇದು ನಡೆಯುವುದು ಚಿತ್ರರಂಗದವರಿಂದ.. ಚಿತ್ರರಂಗದ ಎಲ್ಲ ಕಲಾವಿದರು, ತಂತ್ರಜ್ಞರು, ಕಾರ್ಮಿಕರು.. ಸೇರಿದಂತೆ ಪ್ರತಿಯೊಬ್ಬರೂ ಭಾಗವಹಿಸಲಿದ್ದಾರೆ. ಬೇರೆ ಭಾಷೆಯ ಕಲಾವಿದರಿಗೂ ಆಹ್ವಾನ ನೀಡಲಾಗಿದೆ. ಆದರೆ, ಯಾರು ಬರುತ್ತಾರೆ.. ಯಾರು ಬರೋದಿಲ್ಲ ಅನ್ನೋ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಆ ದಿನ ಇಡೀ ಚಿತ್ರರಂಗಕ್ಕೆ ರಜೆ. ಯಾವುದೇ ಶೂಟಿಂಗ್, ಪ್ರೊಡಕ್ಷನ್ ಕೆಲಸಗಳೂ ನಡೆಯೋದಿಲ್ಲ. ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಇಲ್ಲ. ಸಿನಿಮಾ ಶೋಗಳು ಎಂದಿನಂತೆ ನಡೆಯಲಿವೆ.
ಅಶ್ವಿನಿ ಪುನೀತ್ ರಾಜ್ಕುಮಾರ್, ಮಕ್ಕಳು, ಶಿವಣ್ಣ, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸೇರಿದಂತೆ ಎಲ್ಲರೂ ಭಾಗವಹಿಸುತ್ತಾರೆ. ಮೈಸೂರಿನ ಮಹಾರಾಜ ಯದುವೀರ್ ಒಡೆಯರ್ ಕೂಡಾ ಭಾಗವಹಿಸುತ್ತಾರೆ.
ನಾಗೇಂದ್ರ ಪ್ರಸಾದ್ ಮತ್ತು ಗುರುಕಿರಣ್ ಗೀತ ನಮನ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಮನರಂಜನೆ ಇರೋದಿಲ್ಲ. ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮ ಸಂಜೆ 6 ಗಂಟೆಯ ಹೊತ್ತಿಗೆ ಮುಗಿಯಲಿದೆ.