ಜುಲೈ 12ನೇ ತಾರೀಕಿಗೆ ಶಿವರಾಜ್ ಕುಮಾರ್ ಹುಟ್ಟುಹಬ್ಬವಿದೆ. ಆದರೆ, ಈ ಬಾರಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸುತ್ತಿಲ್ಲ.
ಶಿವಣ್ಣನವರ ತಾಯಿ ಪಾರ್ವತಮ್ಮ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಹುಟ್ಟುಹಬ್ಬದ ಸಂಭ್ರಮದಿಂದ ದೂರವೇ ಉಳಿದಿದ್ದಾರೆ ಶಿವಣ್ಣ. ಹುಟ್ಟುಹಬ್ಬದ ಸಂಭ್ರಮದ ಬದಲಿಗೆ ರಾಜ್ಯ ಸಶಸ್ತ್ರ ಮೀಸಲು ಪಡೆ ಪೊಲೀಸ್ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅವರಷ್ಟೇ ಅಲ್ಲ, ಟಗರು ಚಿತ್ರದ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಕೂಡಾ ನಿಧಿಗೆ ದೇಣಿಗೆ ಕೊಟ್ಟಿದ್ದಾರೆ.