ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟ ಪ್ರಕಾಶ್ ರೈ, ಸೃಜನ್ ಲೋಕೇಶ್, ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಚಿತ್ರನಟ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಜಗ್ಗೇಶ್, ರಕ್ಷಿತಾ ಪ್ರೇಮ್, ಸಂಜನಾ ಗರ್ಲಾನಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ಇದು ಬೆಂಗಳೂರಿನ ನೆಮ್ಮದಿಗೆ ಒಳ್ಳೆಯದಲ್ಲ. ನೆಮ್ಮದಿಯ ಸಮಾಜಕ್ಕೆ ಇದು ಉತ್ತಮವಲ್ಲ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
Related Articles :-