ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ, ಯುವಕರಲ್ಲಂತೂ ಕ್ರೇಜ್‍ನ್ನೇ ಸೃಷ್ಟಿಸಿದ್ದರು. ಆ ಚಿತ್ರದ ನಂತರ ಅವರು ಕನ್ನಡದಲ್ಲಿ ನಟಿಸುತ್ತಿರುವುದು ಆಂಜನಿಪುತ್ರ ಚಿತ್ರದಲ್ಲಿ ಮಾತ್ರ.
ತೆಲುಗಿನಲ್ಲಿ ಈಗಾಗಲೇ ಅಲ್ಲು ಅರ್ಜುನ್ ಜೊತೆ `ನಾ ಪೇರು ಸೂರ್ಯ, ನಾ ಇಲ್ಲು ಇಂಡಿಯಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದಾದ ನಂತರ ಏನು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಅಲ್ಲು ಅರ್ಜುನ್ ಅವರ ಕುಟುಂಬದ ಗೀತಾ ಆಟ್ರ್ಸ್‍ನ ಇನ್ನೊಂದು ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.
ತೆಲುಗಿನ ವಿಜಯ್ ದೇವರಕೊಂಡ ನಾಯಕತ್ವದ ಹೊಸ ಚಿತ್ರದಲ್ಲಿ ರಶ್ಮಿಕಾ ಹೀರೋಯಿನ್.ಪರಶುರಾಮ್ ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿಯಿಂದ ಹಂಚಿಕೊಂಡಿದ್ದಾರೆ ರಶ್ಮಿಕಾ.