` ಶೂಟಿಂಗ್ ವೇಳೆ ಅಪಘಾತ, ರಾಗಿಣಿಗೆ ಗಾಯ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ragini injured during mch movie
Ragini Injured

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಶೂಟಿಂಗ್ ಅಪಘಾತ ಸಂಭವಿಸಿದೆ. ಎಮ್ ಸಿ ಎಚ್ ಎಂಬ ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಅವರ ಕಿವಿಗೆ ಏಟು ಬಿದ್ದಿದೆ. ಕೌರವ ವೆಂಕಟೇಶ್ ಸಾಹಸ ನಿರ್ದೇಶನದ ಫೈಟಿಂಗ್ ದೃಶ್ಯ ಚಿತ್ರೀಕರಣದ ವೇಳೆ ಈ ಅಪಘಾತ ನಡೆದಿದೆ. ಮುಸ್ಸಂಜೆ ಮಹೇಶ್ ನಿರ್ದೇಶನದ ಚಿತ್ರದಲ್ಲಿ ರಾಗಿಣಿ ನಾಯಕಿ. 

ಇನ್ಸ್‌ಪೆಕ್ಟರ್ ಪಾತ್ರದಲ್ಲಿ ನಟಿಸುತ್ತಿರುವ ರಾಗಿಣಿ ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ರಾಗಿಣಿಗೆ ವೈದ್ಯರು ಎರಡು ದಿನಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಚಿತ್ರಲೋಕಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಗಿಣಿ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

#

Edakallu GuddadaMele Movie Gallery

Rightbanner02_backasura_inside

Dandupalya 3 Movie Gallery