` ಕಿಚ್ಚನ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
cm sidaramaiah, sudeep image
Sudeep Gets quick response by Cm Siddaramaiah

ಇತ್ತೀಚೆಗೆ ಕಿಚ್ಚ ಸುದೀಪ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ವಿಷ್ನು ಸಮಾಧಿ ಅಭಿವೃದ್ಧಿಯ ಕುರಿತು ಮಾತನಾಡಿದ್ದರು. ವಿಷ್ಣು ಅವರ ಸಮಾಧಿ ಸ್ಥಳವನ್ನು ಪುಣ್ಯಭೂಮಿ ಎಂದು ಘೋಷಿಸಿ, ಅಭಿವೃದ್ಧಿಯ ಜವಾಬ್ದಾರಿಯನ್ನು ಅಭಿಮಾನಿಗಳಿಗೇ ಕೊಟ್ಟರೂ ನಿರ್ವಹಿಸುತ್ತೇವೆ ಎಂದು ಹೇಳಿದ್ದರು. ವಿಷ್ಣು ಸ್ಮಾರಕ ನಿರ್ಮಾಣದ ಯೋಜನೆಗೆ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ್ದ ಸುದೀಪ್, ವಿಷ್ಣು ಅವರ ಸಮಾಧಿ ಸ್ಥಳ ಅಭಿವೃದ್ಧಿಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಸುದೀಪ್ ಅವರ ಮನವಿಗೆ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಅಪರ ಕಾರ್ಯದರ್ಶಿ ಡಾ.ಸಿಂಧೆ ಭೀಮಸೇನ ರಾವ್ ಅವರಿಗೆ ಈ ಕುರಿತು ಪರಿಶೀಲಿಸುವಂತೆ ಸೂಚನೆ ಕೊಟ್ಟಿದ್ದಾರೆ. ಡಾ.ವಿಷ್ಣುವರ್ಧನ ಪುಣ್ಯಭೂಮಿ ಅಭಿವೃದ್ಧಿ ಕುರಿತು ಸಿಎಂ ಸೂಚನೆ ನೀಡಿದ್ದು, ತಮ್ಮ ಅರ್ಜಿಯನ್ನು ಪರಿಶೀಲಿಸುತ್ತಿದ್ದೇವೆ ಎಂದು ಸ್ವತಃ ಭೀಮಸೇನ ರಾವ್ ಸುದೀಪ್ ಅವರಿಗೆ ಪತ್ರ ಬರೆದಿದ್ದಾರೆ. 

ತುರ್ತಾಗಿ ಕ್ರಮ ತೆಗೆದುಕೊಂಡ ಮುಖ್ಯಮಂತ್ರಿಗಳಿಗೆ ಸುದೀಪ್ ಧನ್ಯವಾದ ಅರ್ಪಿಸಿದ್ದಾರೆ.ವಿಷ್ಣು ಅಭಿಮಾನಿಗಳಾದ ನಮಗೆಲ್ಲ ಇದು ಅವಿಸ್ಮರಣೀಯ ಕ್ಷಣ ಎಂದು ಹೇಳಿಕೊಂಡಿದ್ದಾರೆ ಸುದೀಪ್.

Kaalidasa Kannada Mestru Pressmeet Gallery

Kabza Movie Launch Gallery