ರ್ಯಾಂಬೋ 2 ಸಿನಿಮಾ ರಿಲೀಸ್ ಆಗಿದೆ. ಸೂಪರ್ ಹಿಟ್ ಪ್ರದರ್ಶನ ಕಾಣುತ್ತಿದೆ. ಈ ವರ್ಷದ ಸೂಪರ್ ಹಿಟ್ ಸಿನಿಮಾ ಆಗುವ ಎಲ್ಲ ಸೂಚನೆಗಳೂ ಸಿಕ್ಕಿದೆ. ಶರಣ್, ಅಶಿಕಾ ರಂಗನಾಥ್ ಜೋಡಿ ಚುಟುಚುಟು ಮೋಡಿ ಮಾಡಿದೆ. ಇದೆಲ್ಲದರ ಮಧ್ಯೆ ಪ್ರೇಕ್ಷಕರಿಗೆ ಮತ್ತೊಮ್ಮೆ ಕಾಶೀನಾಥ್ ಅವರನ್ನು ನೆನಪಿಸಿದೆ.
ಚಿತ್ರದ ಟೈಟಲ್ ಕಾರ್ಡ್‍ನಲ್ಲಿ ಚಿತ್ರವನ್ನು ಕಾಶೀನಾಥ್ ಅವರಿಗೆ ಅರ್ಪಣೆ ಮಾಡಲಾಗಿದೆ. ಚಿತ್ರದ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರ ವಹಿಸಿರುವ ತರುಣ್ ಸುಧೀರ್ ನಿರ್ದೇಶನದ ಚೌಕ ಚಿತ್ರದಲ್ಲಿ ಕಾಶೀನಾಥ್ ಪ್ರಮುಖ ಪಾತ್ರ ಮಾಡಿದ್ದರು. ಹೀಗಾಗಿಯೇ ಚಿತ್ರದ ಟೈಟಲ್ ಕಾರ್ಡ್‍ನಲ್ಲೇ ಹಿರಿಯ ನಿರ್ದೇಶಕನನ್ನು ಸ್ಮರಿಸಿಕೊಂಡಿದ್ದಾರೆ ತರುಣ್ ಸುಧೀರ್.