` ಕೊಡಗು ಸಂತ್ರಸ್ತರಿಗೆ ಫಿಲಂ ಚೇಂಬರ್‍ನಿಂದ 20 ಲಕ್ಷ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
kfcc hands over flood relief cheque
kfcc donates 20 lakhs to kodagu relief

ಧಾರಾಕಾರ ಮಳೆ, ಪ್ರವಾಹ, ಭೂಕುಸಿತಕ್ಕೆ ಕೊಚ್ಚಿ ಹೋಗಿರುವ ಕೊಡಗು ಜಿಲ್ಲೆಯ ಜನರಿಗೆ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಕನ್ನಡ ಚಿತ್ರೋದ್ಯಮವೂ ಸ್ಪಂದಿಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಕರ್ನಾಟಕ ಚಲನಚಿತ್ರ  ವಾಣಿಜ್ಯ ಮಂಡಳಿ, 20 ಲಕ್ಷ ರೂ. ದೇಣಿಗೆ ನೀಡಿದೆ. ಕೇರಳ ಸಂತ್ರಸ್ತರಿಗೆ 5 ಲಕ್ಷ ರೂ. ದೇಣಿಗೆ ನೀಡಿದೆ.

ಇದು ಆರಂಭವಷ್ಟೇ. ಮುಂದಿನ ದಿನಗಳಲ್ಲಿ ಕೊಡಗು ಜನರಿಗೆ ಯಾವ ರೀತಿ ನೆರವಾಗಬಹುದು ಎಂಬ ನಿಟ್ಟಿನಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಚೇಂಬರ್ ಅಧ್ಯಕ್ಷ ಚಿನ್ನೇಗೌಡರು ತಿಳಿಸಿದ್ದಾರೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಗಳಲ್ಲೂ ಚಿತ್ರೋದ್ಯಮ ಕೈ ಜೋಡಿಸಲಿದೆ ಎಂದು ಚಿನ್ನೇಗೌಡ ತಿಳಿಸಿದ್ದಾರೆ.

I Love You Movie Gallery

Rightbanner02_butterfly_inside

One Way Movie Gallery