ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಈ ಬಾರಿ ಪತ್ನಿ ವಿಜಯಲಕ್ಷ್ಮಿಯವರೊಂದಿಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ್ದ ದರ್ಶನ್, ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಶಶಿಶೇಖರ್ ದೀಕ್ಷಿತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇತ್ತೀಚೆಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ದರ್ಶನ್ ಅವರಿದ್ದ ಕಾರು ಅಪಘಾತಕ್ಕೀಡಾಗಿತ್ತು. ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಸ್ನೇಹಿತರು ಕೂಡಾ ಗಾಯಗೊಂಡಿದ್ದರು. ದರ್ಶನ್ ಬಲಗೈ ಮೂಳೆ ಫ್ರಾಕ್ಚರ್ ಆಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.