` ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಯಶ್, ಕೆಜಿಎಫ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
kgf team visits shiridi sai baba
KGF Team Visits Shirdi

ರಾಕಿಂಗ್ ಸ್ಟಾರ್ ಯಶ್, ಕೆಜಿಎಫ್ ಚಿತ್ರತಂಡದ ಜೊತೆ ಶಿರಡಿಯಲ್ಲಿ ಸಾಯಿಬಾಬಾ ದರ್ಶನ ಪಡೆದಿದ್ದಾರೆ. ಸಾಯಿಬಾಬಾರನ್ನು ಪ್ರಾರ್ಥನೆ ಮಾಡುವ ಮೂಲಕ ಕೆಜಿಎಫ್ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ರಿಲೀಸ್‍ಗೆ ಈಗ ಕೆಲವು ದಿನಗಳಷ್ಟೇ ಬಾಕಿ ಇವೆ. ಚಿತ್ರದ ಪ್ರಚಾರಕ್ಕೆ, ಬಿಡುಗಡೆಗೆ ಯಾವುದೇ ಅಡೆತಡೆ ಬಾರದಿರಲಿ ಎನ್ನುವುದು ಯಶ್ ಮತ್ತು ಕೆಜಿಎಫ್ ಚಿತ್ರತಂಡದ ಪ್ರಾರ್ಥನೆ.

ಯಶ್ ಅವರೊಂದಿಗೆ ವಿಜಯ್ ಕಿರಗಂದೂರು ಮತ್ತು ಗೆಳೆಯರು ಶಿರಡಿಗೆ ಹೋಗಿದ್ದರು. ಸಾಯಿಬಾಬಾ ದರ್ಶನ ಪಡೆದು, ನಂತರ ಕೊಲ್ಲಾಪುರಕ್ಕೆ ತೆರಳಿ ಮಹಾಲಕ್ಷ್ಮಿ ದೇವಿಗೂ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಡಿಸೆಂಬರ್ 21ಕ್ಕೆ ರಿಲೀಸ್ ಆಗುತ್ತಿದೆ. ಇದರ ಮೊದಲ ಭಾಗವಾಗಿ ನವೆಂಬರ್ 9ರಂದು ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ.