ಕಿರಿಕ್ ಪಾರ್ಟಿಯಿಂದ ಗುರುತಿಸಿಕೊಂಡ ರಶ್ಮಿಕಾ ಮಂದಣ್ಣ, ನಂತರ ಕನ್ನಡದಲ್ಲಿ ನಟಿಸಿದ್ದು ಅಂಜನೀಪುತ್ರ, ಚಮಕ್ ಚಿತ್ರಗಳಲ್ಲಿ. ತೆಲುಗಿನಲ್ಲಿ ಗೀತ ಗೋವಿಂದಂ ಹಿಟ್ ಆದ ನಂತರ ಸ್ಟಾರ್ ಆದ ರಶ್ಮಿಕಾ, ತೆಲುಗಿನಲ್ಲಿಯೇ ಹೆಚ್ಚು ಬ್ಯುಸಿಯಾಗಿಬಿಟ್ಟರು. ಸದ್ಯಕ್ಕೆ ಯಜಮಾನ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ, ಮತ್ತೊಂದು ಕನ್ನಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ಮುಂದಿನ ಸಿನಿಮಾ ಪೊಗರು.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾಗೆ ರಶ್ಮಿಕಾ ಓಕೆ ಎಂದಿದ್ದಾರೆ. ನಂದ ಕಿಶೋರ್ ನಿರ್ದೇಶನದ ಪೊಗರು ಚಿತ್ರಕ್ಕೆ ಚಿತ್ರಕಥೆ ಬರೆದಿರುವುದು ಅರ್ಜುನ್ ಸರ್ಜಾ. ಪೊಗರು ಚಿತ್ರದ 2ನೇ ಹಂತದ ಚಿತ್ರೀಕರಣ ನವೆಂಬರ್ 20ರಿಂದ ಶುರುವಾಗಲಿದೆ.