ಕೊಲ್ಲೂರು ಮೂಕಾಂಬಿಕೆ, ಧರ್ಮಸ್ಥಳ ಮಂಜುನಾಥೇಶ್ವರ, ಕುಕ್ಕೆ ಸುಬ್ರಹ್ಮಣ್ಯ.. ಹೀಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ಪುಣ್ಯಕ್ಷೇತ್ರಗಳ ಯಾತ್ರೆ ಮಾಡಿದ್ದಾರೆ.
ಕೊಲ್ಲೂರಿಗೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಯಶ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು, ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು. ಕಾಣಿಕೆ ಅರ್ಪಿಸಿದರು.
ನಂತರ ಧರ್ಮಸ್ಥಳಕ್ಕೆ ತೆರಳಿ, ಮಂಜುನಾಥನ ದರ್ಶನ ಪಡೆದರು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಅದಾದ ಬಳಿಕ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.