ಕೆಜಿಎಫ್ ಚಿತ್ರದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ಮ್ಯೂಸಿಕ್, ಸೌಂಡ್, ಡೈಲಾಗ್ಸ್, ಕ್ಯಾಮೆರಾ ಟೇಕಿಂಗ್ಸ್.. ಈ ಎಲ್ಲದರ ನಡುವೆ ಯುವಕರ ಕಣ್ಣು ಕುಕ್ಕುತ್ತಿರೋದು ರಾಖಿ ಭಾಯ್ ಬೈಕ್.
ಮೊದಲೇ 70-80ರ ದಶಕದ ಕಥೆ. ಹೀಗಾಗಿ ಆಗಿನ ಕಾಲದ ಬೈಕ್‍ನ್ನೇ ಬಳಸಿಕೊಳ್ಳೋ ಪ್ಲಾನ್ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಇತ್ತು. ಆದರೆ, ಮೈಲೇಜ್, ಕೆಪ್ಯಾಸಿಟಿ ಪ್ರಾಬ್ಲಂಗಳಿಂದಾಗಿ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ ಗಾಡಿಯನ್ನೇ ಹಳೆಯ ರೂಪಕ್ಕೆ ಬದಲಿಸಲಾಯಿತು. ನಾವು ಟ್ರೇಲರ್‍ನಲ್ಲಿ ನೋಡ್ತಿರೋದು ಅದೇ ಬೈಕ್.
ಆ ಬೈಕ್ ಮೇಲೆ ಯಶ್‍ಗೆ ಲವ್ವಾಗಿ ಬಿಟ್ಟಿದೆ. ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ಮುಗಿದ ಮೇಲೆ ಆ ಬೈಕ್‍ನ್ನು ಸ್ವಂತಕ್ಕೆ ತೆಗೆದುಕೊಳ್ಳೋ ಪ್ಲಾನ್ ಹಾಕಿಕೊಂಡಿದ್ದಾರಂತೆ ಯಶ್.