` ಕನ್ನಡ ಅಷ್ಟೇ ಅಲ್ಲ, 4 ಭಾಷೆಯಲ್ಲಿ ಕುರುಕ್ಷೇತ್ರ  - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
kurukshetra to release in 4 languages
Kurukshetra

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಮುನಿರತ್ನ ಕುರುಕ್ಷೇತ್ರ ರಿಲೀಸ್‍ಗೆ ಕ್ಷಣಗಣನೆ ಶುರುವಾಗಿದೆ. ಕನ್ನಡದ ಜೊತೆ ಇತರೆ ಭಾಷೆಗಳಲ್ಲೂ ರಿಲೀಸ್ ಮಾಡಲಿದ್ದೇವೆ ಎನ್ನುತ್ತಿದ್ದ ಚಿತ್ರತಂಡ, ಸಿನಿಮಾವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಅದಕ್ಕೆ ತಕ್ಕಂತೆ, ಕುರುಕ್ಷೇತ್ರ ಚಿತ್ರದ ಕನ್ನಡ, ತೆಲುಗು, ತಮಿಳು, ಮಲಯಾಳಂನಲ್ಲಿ ಚಿತ್ರದ ಪೋಸ್ಟರ್ ಹೊರಬಿದ್ದಿದೆ.

ದರ್ಶನ್ ಅಭಿನಯದ 51ನೇ ಸಿನಿಮಾ ಈಗಾಗಲೇ ರಿಲೀಸ್ ಆಗಿ, 50 ದಿನ ಪೂರೈಸಿ ಮುನ್ನುಗ್ಗುತ್ತಿದೆ. ರೆಬಲ್‍ಸ್ಟಾರ್ ಅಂಬರೀಷ್ ಅಭಿನಯದ ಕೊನೆಯ ಸಿನಿಮಾ ಆಗಿರುವ ಕುರುಕ್ಷೇತ್ರ ಚಿತ್ರದಲ್ಲಿ ಅರ್ಧಕ್ಕರ್ಧ ಸ್ಯಾಂಡಲ್‍ವುಡ್ ತಾರೆಯರು ನಟಿಸಿದ್ದಾರೆ. ರವಿಚಂದ್ರನ್, ಶ್ರೀನಾಥ್, ಅರ್ಜುನ್ ಸರ್ಜಾ, ಭಾರತಿ ವಿಷ್ಣುವರ್ಧನ್, ಹರಿಪ್ರಿಯಾ, ಸ್ನೇಹ, ಮೇಘನಾ ರಾಜ್, ನಿಖಿಲ್ ಕುಮಾರಸ್ವಾಮಿ, ರವಿಶಂಕರ್ ಸೇರಿದಂತೆ ಬಹುತೇಕ ಕನ್ನಡ ಚಿತ್ರರಂಗದ ಕಲಾವಿದರು ಚಿತ್ರದಲ್ಲಿದ್ದಾರೆ.

#

I Love You Movie Gallery

Rightbanner02_butterfly_inside

Yaana Movie Gallery