ಇತ್ತೀಚೆಗಷ್ಟೇ ಸೈನೇಡ್ ಗುಡ್ಡದ ಶೂಟಿಂಗ್ ಸಂಕಟದಿಂದ ಪಾರಾಗಿದ್ದ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಈಗ ಇನ್ನೊಂದು ಸಮಸ್ಯೆ ಎದುರಾಗಿದೆ. ಅದು ಬಂದಿರೋದು ರೌಡಿ ತಂಗಂ ತಾಯಿಯಿಂದ. ಕೆಜಿಎಫ್ 1 ಸಿನಿಮಾದಲ್ಲಿ ನನ್ನ ಮಗನನ್ನು ಒಳ್ಳೆಯ ರೀತಿ ತೋರಿಸುತ್ತೇವೆ ಎಂದು ಹೇಳಿ, ಅವನನ್ನು
ಕೆಟ್ಟದಾಗಿ ತೋರಿಸಿದ್ದಾರೆ. ಹೀಗಾಗಿ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣಕ್ಕೆ ತಡೆ ನೀಡಬೇಕು ಎಂದು ತಂಗಂ ತಾಯಿ ಪೌಳಿ, 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರೌಡಿ ತಂಗಂ ಹಲವು ವರ್ಷಗಳ ಹಿಂದೆ, ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ರೌಡಿ. ಅರ್ಜಿ ಹಿನ್ನೆಲೆಯಲ್ಲಿ ನ್ಯಾಯಾಲಯ, ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಮತ್ತು ಬಿಜಿಎಂಎಲ್ ಕಂಪೆನಿಗೆ ಸಮನ್ಸ್ ನೀಡಿದೆ. ಅರ್ಜಿಯ ವಿಚಾರಣೆ ಅಕ್ಟೋಬರ್ 9ಕ್ಕೆ ನಿಗಧಿಯಾಗಿದೆ.