ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಗುಡ್ ನ್ಯೂಸ್ ಇದು. ನಂದಕಿಶೋರ್ ನಿರ್ದೇಶನದಲ್ಲಿ ರೆಡಿಯಾಗುತ್ತಿರುವ ಸಿನಿಮಾದ ಝಲಕ್ ಆದರೂ ತೋರಿಸಿ ಎನ್ನುತ್ತಿದ್ದ ಅಭಿಮಾನಿಗಳಿಗೆ, ಸಿನಿಮಾದ ಝಲಕ್ ತೋರಿಸಲು ಪೊಗರು ಟೀಂ ನಿರ್ಧಾರ ಮಾಡಿದೆ.
ಅಕ್ಟೋಬರ್ 24ರಂದು ಪೊಗರು ಚಿತ್ರದ ಟ್ರೇಲರ್ ಹೊರಬೀಳಲಿದೆ. ಧ್ರುವ ಸರ್ಜಾ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಚಿತ್ರದಲ್ಲಿ ಧ್ರುವ ಸರ್ಜಾ ಎರಡು ಶೇಡ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ.