` ಡಿ. 27ಕ್ಕೆ ಅವನೇ ಶ್ರೀಮನ್ನಾರಾಯಣ ಪ್ರತ್ಯಕ್ಷ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
avane srimnarayana released date fixed
Avane Srimanarayana Movie Image

ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವಾಸ್ತವ್ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. 2016ರ ಡಿಸೆಂಬರ್ 30ರಂದು ರಿಲೀಸ್ ಆಗಿದ್ದ ಕಿರಿಕ್ ಪಾರ್ಟಿ ಚಿತ್ರವೇ ಕೊನೆ. ಅದಾದ ಮೇಲೆ ರಕ್ಷಿತ್ ಶೆಟ್ಟಿ ಅಭಿನಯದ ಬೇರೆ ಸಿನಿಮಾ ತೆರೆ ಕಂಡಿಲ್ಲ. ಪಡ್ಡೆಹುಲಿಯಲ್ಲಿ ಇದ್ದರಾದರೂ ಅದು ಗೆಸ್ಟ್ ರೋಲ್ ಆಗಿತ್ತು. ಈಗ ಬರೋಬ್ಬರಿ ಎರಡೂವರೆ ವರ್ಷಗಳ ನಂತರ ಬರುತ್ತಿದ್ದಾರೆ. ಅಫ್‍ಕೋರ್ಸ್.. ರಿಲೀಸ್ ಹೊತ್ತಿಗೆ ಸರಿಯಾಗಿ 3 ವರ್ಷವಾಗುತ್ತೆ.

ಅವನೇ ಶ್ರೀಮನ್ನಾರಾಯಣ ಸಿನಿಮಾ ಕನ್ನಡ. ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಪಕರಾಗಿರುವ ಚಿತ್ರಕ್ಕೆ ಸಚಿನ್ ರವಿ ನಿರ್ದೇಶಕ.

Kaalidasa Kannada Mestru Movie Gallery

Kabza Movie Launch Gallery