ರಕ್ಷಿತ್ ಶೆಟ್ಟಿ ಅಭಿನಯದ ಹೊಸ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ..
ಗೋಧಿ ಬಣ್ಣ ಸಾಧಾರಣ ಮೈಕಟ್ಟು ನಂತರ ಹೇಮಂತ್ ರಾವ್ ನಿರ್ದೇಶಿಸುತ್ತಿರುವ ರಕ್ಷಿತ್ ಶೆಟ್ಟಿ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ.. ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದೆ.
ರಕ್ಷಿತ್ ಎದುರು ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಮನು-ಪ್ರಿಯಾ ಜೋಡಿಯ ಮೊದಲಾರ್ಧ ಪ್ರೇಮಕಥೆ ಮುಗಿದಿದೆ. ಉಳಿದರ್ಧ ಕಥೆಗೆ ರಕ್ಷಿತ್ ಶೆಟ್ಟಿ ತೂಕ ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಇನ್ನೊಂದು ತಿಂಗಳ ನಂತರ 2ನೇ ಹಂತದ ಶೂಟಿಂಗ್ ಶುರುವಾಗಲಿದೆ.