ಕನ್ನಡ ಚಿತ್ರರಂಗಕ್ಕೆ ಹೊಸ ಚರಿತ್ರೆ ಬರೆಯಲಿದೆ ಎಂಬ ನಿರೀಕ್ಷೆ ಮೂಡಿಸಿರುವ ಸಿನಿಮಾ ಕೆಜಿಎಫ್ ಚಾಪ್ಟರ್ 2. ಏಪ್ರಿಲ್ 14ಕ್ಕೆ ರಿಲೀಸ್ ಆಗಲಿರುವ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಚುರುಕಾಗಿ ನಡೆಯುತ್ತಿವೆ. ಚಿತ್ರದ ನಾಯಕಿ ರೀನಾ ದೇಸಾಯಿ ಪಾತ್ರದಲ್ಲಿ ನಟಿಸಿರೋ ಶ್ರೀನಿಧಿ ಶೆಟ್ಟಿ, ತಮ್ಮ ಪಾತ್ರದ ಡಬ್ಬಿಂಗ್ ಮುಗಿಸಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರ ಕೆಜಿಎಫ್ ಚಾಪ್ಟರ್ 2. ಯಶ್ ಹೀರೋ ಆಗಿದ್ದರೆ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರೈ ಇನ್ನಿತರ ಪಾತ್ರಗಳಲ್ಲಿದ್ದಾರೆ. ಈಗಾಗಲೇ ಚಿತ್ರದ ಉಳಿದವರ ಡಬ್ಬಿಂಗ್ ಮುಗಿದಿದೆ.
ಇನ್ನು ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್ ಬಿಟ್ಟರೆ ಒಪ್ಪಿಕೊಂಡಿರುವ ಇನ್ನೊಂದು ಸಿನಿಮಾ ತಮಿಳಿನ ಕೋಬ್ರಾ. ಆ ಚಿತ್ರದಲ್ಲಿ ವಿಕ್ರಂ ಹೀರೋ.