ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ವಿಧಿವಶರಾಗಿದ್ದಾರೆ. ಜೆಪಿನಗರದಲ್ಲಿ ತಮ್ಮ ಮನೆಯ ಸಮೀಪವೇ ಮುಂಜಾನೆ ವಾಕಿಂಗ್ ಹೋಗಿದ್ದಾಗ ಹಿಂದಿನಿಂದ ಬಂದ ವಾಹನವೊಂದು ಗುದ್ದಿ ಬಾಲರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಬಾಲರಾಜ್ ಕೊನೆಯುಸಿರೆಳೆದಿದ್ದಾರೆ.
ಬಾಲರಾಜ್ ಅವರಿಗೆ 58 ವರ್ಷ ವಯಸ್ಸಾಗಿತ್ತು. ಕರಿಯ, ಕರಿಯ 2, ಗಣಪ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದ್ದ ಬಾಲರಾಜ್, ಆನೇಕಲ್ ಬಾಲರಾಜ್ ಎಂದೇ ಚಿರಪರಿಚಿತರಾಗಿದ್ದರು. ಬಾಲರಾಜ್ ಅವರ ಪುತ್ರ ಸಂತೋಷ್ ಕೂಡಾ ಚಿತ್ರರಂಗದಲ್ಲಿಯೇ ಗುರುತಿಸಿಕೊಂಡಿದ್ದಾರೆ.