` ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ. - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ.
Shivanna Releases The Theatrical Trailer Of Love 360

ಶಶಾಂಕ್ ನಿರ್ದೇಶನದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್ ನಿರ್ದೇಶನದ "ಲವ್ 360" ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ "ಜಗವೇ ನೀನು ಗೆಳತಿಯೆ" ಹಾಡಂತೂ ನನಗೆ ಬಹಳ ಇಷ್ಟ. ನಾಯಕ, ನಾಯಕಿ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಾನು ಬಿಡುಗಡೆ ದಿನದಂದೇ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಅಭಿಮಾನಿಗಳ

ಜೊತೆಗೆ ನೋಡುತ್ತೇನೆ ಎಂದರು ನಟ ಶಿವರಾಜಕುಮಾರ್.

ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದಗಳು. ಚಿತ್ರ ಆಗಸ್ಟ್ ೧೯ರಂದು ತೆರೆ ಕಾಣಲಿದೆ. ಅದಕ್ಕೂ ಮುನ್ನ ನಾವು ಬೇರೆ ಬೇರೆ ಊರುಗಳಿಗೆ ಭೇಟಿ ನೀಡುತ್ತಿದ್ದೇವೆ. ಹೋದ ಕಡೆ ಸಿಗುತ್ತಿರುವ

ಅಭೂತಪೂರ್ವ ಬೆಂಬಲಕ್ಕೆ‌ ಮನತುಂಬಿ ಬಂದಿದೆ. ಖ್ಯಾತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ನೂರೈವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳನ್ನು ಜನಪ್ರಿಯಗೊಳಿಸಿರುವ ಕನ್ನಡ ಕಲಾ ರಸಿಕರು ಚಿತ್ರವನ್ನೂ ಗೆಲಿಸುತ್ತಾರೆಂಬ ನಂಬಿಕೆ ಇದೆ ಎಂದರು ನಿರ್ದೇಶಕ ಶಶಾಂಕ್.

ನನ್ನ ಸ್ನೇಹಿತನೊಬ್ಬ, "ನೀನು ಹೀರೋ ತರಹ ಇಲ್ಲ. ನಿನ್ನ ಸಿನಿಮಾ ಯಾರು ನೋಡುತ್ತಾರೆ ಅಂದಿದ್ದ". ಆ ಮಾತು‌ ನನ್ನ ಮನಸ್ಸಿನಲ್ಲೇ ಇತ್ತು. ಆದರೆ ಈಗ ಬೇರೆ ಬೇರೆ ಊರುಗಳಿಗೆ, ಅದರಲ್ಲೂ ಕಾಲೇಜುಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿದ್ಯಾರ್ಥಿಗಳು ನನ್ನನ್ನು ಗುರುತಿಸುತ್ತಿರುವ ರೀತಿ ಕಂಡು ಆಶ್ಚರ್ಯವಾಗಿದೆ. ಹೆಣ್ಣುಮಕ್ಕಳಂತೂ ನಾವು ನಿಮ್ಮ ಅಭಿಮಾನಿಗಳು. ನಿಮ್ಮ ಚಿತ್ರದ ಹಾಡುಗಳು ತುಂಬಾ ‌ಚೆನ್ನಾಗಿದೆ. ನೀವು ತುಂಬಾ ಚೆನ್ನಾಗಿ ಕಾಣುತ್ತೀರಾ ಎನ್ನುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ನಿರ್ದೇಶಕ ಶಶಾಂಕ್ ಸರ್. ಅವರಿಗೆ ಹಾಗೂ ನನಗೆ ಬೆಂಬಲ ನೀಡುತ್ತಿರುವ ನನ್ನ‌ ತಾಯಿ ಹಾಗೂ ಅಂಕಲ್ ಗೆ ಧನ್ಯವಾದ ಎಂದರು ನಾಯಕ ಪ್ರವೀಣ್.

ನಾಯಕಿ ರಚನಾ ಇಂದರ್ ಸಹ ಚಿತ್ರಕ್ಕೆ ಬಿಡುಗಡೆ ಪೂರ್ವದಲ್ಲಿ ಸಿಗುತ್ತಿರುವ ಪ್ರತಿಕ್ರಿಯೆಗೆ ಸಂತಸಪಟ್ಟರು. ನಟರಾದ ಡ್ಯಾನಿ ಕುಟ್ಟಪ್ಪ ಹಾಗೂ ಮಹಂತೇಶ್ ಸಹ ಚಿತ್ರದ ಕುರಿತು ಮಾತನಾಡಿದರು.