ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ರಸ್ತೆವರೆಗಿನ ಔಟರ್ ರಿಂಗ್ ರೋಡ್ಗೆ ಕರ್ನಾಟಕ ರತ್ನ ಡಾ ಪುನೀತ್ ರಾಜ್ಮಾರ್ ಅವರ ಹೆಸರನ್ನಿಡಲಾಗಿದೆ. ಬಹಳ ಹಿಂದೆಯೇ ಮಾಡಿದ್ದ ಘೋಷಣೆಗೆ ಇಂದು ಅಧಿಕೃತ ಸ್ವರೂಪ ಸಿಗುತ್ತಿದೆ. ಇಂದು ಸಂಜೆ 6 ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಸ್ತೆ ನಾಮಕರಣ ಮಾಡಿ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳು ಮಾಡಲಿದ್ದಾರೆ. ಡಾ ರಾಜ್ಕುಮಾರ್ ಕುಟುಂಬಸ್ಥರು, ಸಚಿವರು, ಚಿತ್ರರಂಗದ ತಾರೆಯರು ಭಾಗಿಯಾಗಲಿದ್ದಾರೆ.
ಡಾ ಪುನೀತ್ ರಾಜ್ಕುಮಾರ್ ನಮ್ಮ ಮಧ್ಯೆ ಇಲ್ಲ. ಆದರೆ ನಮ್ಮೆಲ್ಲರ ಒಳಗಿದ್ದಾರೆ. ಪುನೀತ್ ಓರ್ವ ಹೃದಯವಂತ ವ್ಯಕ್ತಿ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ದೊಡ್ಡದು.
ಅವರ ನೆನಪು ಶಾಶ್ವತವಾಗಿರಬೇಕು ಎಂಬ ದೃಷ್ಟಿಯಿಂದ ನಾಯಂಡಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ವರೆಗಿನ ರಸ್ತೆಗೆ ಕರ್ನಾಟಕ ರತ್ನ ಡಾ ಪುನೀತ್ ರಾಜ್ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. 12 ಕಿ. ಮೀ. ಉದ್ದದ ಈ ರಸ್ತೆಗೆ ಪುನೀತ್ ರಾಜ್ಕುಮಾರ್ ರಸ್ತೆ ಎಂದು ಹೆಸರಿಡುತ್ತಿದ್ದೇವೆ. ಎಂದು ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಆರ್. ಅಶೋಕ್ ಜೊತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ನಿರ್ದೇಶಕರ ಸಂಘದ ಖಜಾಂಚಿ ಉಮೇಶ್ ನಾಯ್ಕ್, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ಲೈನ್ ವೆಂಕಟೇಶ್, ಸುಂದರ್ ರಾಜ್, ಸಿದ್ಧರಾಜು, ಜೈ ಜಗದೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.