` ಪುನೀತ್ ರಾಜ ಕುಮಾರ್ ನಕ್ಷತ್ರ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಪುನೀತ್ ರಾಜ ಕುಮಾರ್ ನಕ್ಷತ್ರ
Puneeth Rajkumar Image

ಮೀನ ರಾಶಿಯ ನಕ್ಷತ್ರಪುಂಜದಲ್ಲಿ ಕಾಣಸಿಗುವ ನಕ್ಷತ್ರವೊಂದಕ್ಕೆ 'ಪುನೀತ್ ರಾಜ್‌ಕುಮಾರ್‌' ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನೋತ್ಸವ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬಿಗ್ ಲಿಟ್ಲ್ ಕಂಪನಿ ನಟ ವಿಕ್ರಮ್ ರವಿಚಂದ್ರನ್ ಅವರೊಂದಿಗೆ ಸೇರಿ ವಿಡಿಯೋ ಗೌರವ ಸಲ್ಲಿಸಿದೆ. ನಟ ವಿಕ್ರಮ್ ರವಿಚಂದ್ರನ್ ಅವರೊಂದಿಗೆ ಬಿಗ್ ಲಿಟ್ಲ್ ಕಂಪನಿ ನಕ್ಷತ್ರಕ್ಕೆ ಶಾಶ್ವತವಾಗಿ ಪುನೀತ್ ರಾಜ್‌ಕುಮಾರ್ ಹೆಸರಿಟ್ಟಿದೆ.

ತಮ್ಮ ನಡುವೆ ತನ್ನ ನಿಷ್ಕಲ್ಮಷ ನಗುವಿನಿಂದಲೇ ಮಿಂಚಿದ್ದ ತಾರೆಯೊಂದು , ಇನ್ನು ಮುಂದೆ ಆಕಾಶದಲ್ಲಿ ಹೊಳೆಯಲಿದೆ. ಕೋಟ್ಯಾಂತರ ನಕ್ಷತ್ರಗಳಲ್ಲಿ ಒಂದು ನಕ್ಷತ್ರಕ್ಕೆ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಇಡಲಾಗಿದೆ. ನಮ್ಮ ನಡುವೆ ಜೀವಿಸಿದ ಪರಮಾತ್ಮನಿಗೆ ನಮ್ಮ ಕಡೆಯಿಂದ ಒಂದು ಪುಟ್ಟ ಸಮರ್ಪಣೆ ಇದು ಕಂಪೆನಿಯ ಮಾತು.

ಆಕಾಶದಲ್ಲಿ ಲೆಕ್ಕವಿಲ್ಲದಷ್ಟು ನಕ್ಷತ್ರಗಳಿವೆ. ಅವುಗಳಲ್ಲಿ ಒಂದು ತಾರೆಗೆ ಅಧಿಕೃತವಾಗಿ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಲಾಗಿದೆಆ ಮೂಲಕ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಅಪ್ಪು ಹೆಸರನ್ನು ಶಾಶ್ವತವಾಗಿಸುವ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ತೊಡಗಿಸಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತೆ. ನಾನು ಚಿಕ್ಕಂದಿನಿಂದಲೂ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದಿದ್ದೇನೆ. ಸಿನಿಮಾದ ಆಚೆಗಿನ ಅವರ ಜೀವನ ಜಗತ್ತಿಗೇ ಸ್ಪೂರ್ತಿ. ಅವರಿಗಾಗಿ ಮಾಡುತ್ತಿರುವ ಒಂದೊಳ್ಳೆ ಕೆಲಸದಲ್ಲಿ ನಾನು ಭಾಗಿಯಾಗಿರೋದು ನನಗೆ ತುಂಬಾ ಖುಷಿ ಕೊಟ್ಟಿದೆ' ಎಂದು ಸಂತಸ ಹಂಚಿಕೊಂಡಿದ್ದಾರೆ ವಿಕ್ರಮ್ ರವಿಚಂದ್ರನ್.

ಸೂಪರ್ ಸ್ಟಾರ್ಗಳ ಬಗ್ಗೆ ಹೊಂದಿರುವ ಅಭಿಪ್ರಾಯವನ್ನು ಅವರು ಬದಲಾಯಿಸಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತವೆ. ಆ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿಬಂದಿದೆ. ನಮ್ಮ ಆಪ್ತರು ನಿಧನರಾದಾಗ ನಕ್ಷತ್ರಗಳಾಗುತ್ತಾರೆ ಅಂತ ನಾವು ನಂಬಿದ್ದೇವೆ. ಅಪ್ಪು ನಮಗೆಲ್ಲ ಸ್ಟಾರ್ ಆಗಿದ್ದರು. ಅವರ ಹೆಸರಲ್ಲಿ ಒಂದು ನಕ್ಷತ್ರ ಇರಬೇಕೆಂದು ನಾವು ಬಯಸುತ್ತೇವೆ. ನಮ್ಮೆಲ್ಲರ ಅತ್ಯುತ್ತಮ ಸ್ಫೂರ್ತಿಯ ಶಕ್ತಿಗೆ ಇದು ನಮ್ಮ ಚಿಕ್ಕ ಕೊಡುಗೆ ದಿ ಬಿಗ್ ಲಿಟ್ಲ್ ಕಂಪನಿಯ ಸಂಸ್ಥಾಪಕಿ ಕಾವ್ಯ ಶಂಕರೇಗೌಡ.