ಬರೋಬ್ಬರಿ 137 ದಿನ. ಎರಡು ಲುಕ್. ಒಂದರಲ್ಲಿ ಸ್ಲಿಮ್ಮು.. ಮತ್ತೊಂದರಲ್ಲಿ ಡುಮ್ಮು.. ಎರಡು ಶೇಡ್‍ಗಳಲ್ಲಿ ಕಾಣಿಸಿಕೊಂಡಿರೋ ರಕ್ಷಿತ್ ಶೆಟ್ಟಿ. ಡೈರೆಕ್ಟರ್ ಹೇಮಂತ್ ರಾವ್. ಗೋಧಿ ಬಣ್ಣ ಸಾಧಾರಣ ಮೈಕಟ್ಟು ನಂತರ ಜೋಡಿ ಸಪ್ತಸಾಗರದಾಚೆಯೆಲ್ಲೋ ಚಿತ್ರದಲ್ಲಿ ಮತ್ತೊಮ್ಮೆ ಜೊತೆಯಾಗಿದೆ. ನಾಯಕಿಯಾಗಿ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಇದ್ದಾರೆ. ಇದೀಗ ಚಿತ್ರ ಚಿತ್ರೀಕರಣ ಪೂರೈಸಿದೆ.
ಕವಲು ದಾರಿ ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ. 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಿ, ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಚಿತ್ರತಂಡ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತನ್ನ ಪಾತ್ರಕ್ಕಾಗಿ ರಕ್ಷಿತ್, 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ.
777 ಚಾರ್ಲಿ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ಗೆ ಎದುರು ನೋಡ್ತಿದ್ದಾರೆ.